ನವದೆಹಲಿ: ಭಾರತದ ಸಶಸ್ತ್ರ ಪಡೆಗಳು 'ಆಪರೇಷನ್ ಸಿಂಧೂರ'ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಗುರುವಾರ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದೆ.
'ದೇಶದ ಪಶ್ಚಿಮ ಭಾಗದಲ್ಲಿರುವ ಭಾರತೀಯ ವಾಯುಪಡೆಯ 13 ಸೇರಿದಂತೆ ಒಟ್ಟು 15 ಸೇನಾ ನೆಲೆಗಳ ಮೇಲೆ ಡ್ರೋನ್ ಹಾಗೂ ಕ್ಷಿಪಣಿಗಳ ಮೂಲಕ ದಾಳಿ ನಡೆಸಿ ಧ್ವಂಸಗೊಳಿಸುವ ಪಾಕಿಸ್ತಾನದ ಪ್ರಯತ್ನವನ್ನು ಭಾರತೀಯ ಸಶಸ್ತ್ರ ಪಡೆಗಳು ವಿಫಲಗೊಳಿಸಿವೆ.




