ನವದೆಹಲಿ: ಸಿಂಧೂ ಜಲ ಒಪ್ಪಂದ ಅಮಾನತು ಪುನರುಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, 'ನಮಗೆ ನದಿಗಳ ಮೇಲೆ ಸಂಪೂರ್ಣ ಹಕ್ಕು ಇದ್ದು, ಪಾಕಿಸ್ತಾನ ನೀರು ಪಡೆಯಲು ಬಿಡಲಾರೆವು' ಎಂದು ಹೇಳಿದ್ದಾರೆ.
ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ ಪಾಕಿಸ್ತಾನದ ಜೊತೆಗಿನ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿತ್ತು.
ರಾಜಸ್ಥಾನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಿಂಧೂ ಜಲ ಒಪ್ಪಂದ ಅಮಾನತು ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.
ಪ್ರತಿಯೊಂದು ಭಯೋತ್ಪಾದಕ ದಾಳಿಗೂ ಪಾಕಿಸ್ತಾನ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

