HEALTH TIPS

Jammu Encounter: ಯೋಧ ಹುತಾತ್ಮ, ನಾಲ್ವರು ಉಗ್ರರನ್ನು ಸುತ್ತುವರಿದ ಸೇನೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶತ್‌ವಾಢ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ. 

ಈ ಕುರಿತು ಭಾರತೀಯ ಸೇನೆಯ 'ವೈಟ್ ನೈಟ್ ಕಾರ್ಪ್ಸ್', ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.

ಛಾತ್ರುವಿನ ಸಿಂಹ್‌ಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.

ಈ ಪ್ರದೇಶದಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆ ಸುತ್ತುವರಿದಿದ್ದು, ಕಾರ್ಯಾಚರಣೆ ಈಗಲೂ ಮುಂದುವರಿದಿದೆ.

ಉಗ್ರರನ್ನು ಮಟ್ಟ ಹಾಕಲು ಪ್ರದೇಶದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries