ಭಾರತದಲ್ಲಿ ಅಪನಂಬಿಕೆ, ಆತಂಕ ಮತ್ತು ಗೊಂದಲ ಸೃಷ್ಟಿಸುವುದು ಅವರ ಉದ್ದೇಶವಾಗಿದೆ. ಉದ್ದೇಶಪೂರ್ವಕವಾಗಿ ಹರಡುತ್ತಿರುವ ತಪ್ಪು ಮಾಹಿತಿಯ ಬಲೆಯಲ್ಲಿ ಬೀಳಬೇಡಿ.
ಮುಂದಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳು ಇಂತಹ ಸುಳ್ಳು ಮಾಹಿತಿಗಳಿಂದ ತುಂಬಿಹೋಗುವ ಸಾಧ್ಯತೆ ಇದೆ. ಹೀಗಾಗಿ, ಯಾವುದೇ ಮಾಹಿತಿಯನ್ನು ಜಾಗರೂಕವಾಗಿ ಪರಿಶೀಲನೆ ನಡೆಸುವುದು ಅತ್ಯಂತ ಪ್ರಮುಖವಾಗಿದೆ ಎಂದು ಅದು ಹೇಳಿದೆ.
ಯಾವುದೇ ತಪ್ಪು ಮಾಹಿತಿ ಕಂಡುಬಂದರೆ, ಅದರಲ್ಲೂ ಸಶಸ್ತ್ರ ಪಡೆ ಕುರಿತಾದ ಅಥವಾ ಸದ್ಯದ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕುರಿತಂತೆ ಸುಳ್ಳು ಮಾಹಿತಿ ಗಮನಕ್ಕೆ ಬಂದರೆ #PIBFactCheckಗೆ ರಿಪೋರ್ಟ್ ಮಾಡಿ. ಈ ಕೆಳಗಿನ ವಾಟ್ಸ್‌ಆಯಪ್ ಸಂಖ್ಯೆ, ಇಮೇಲ್ ಮೂಲಕ ಮಾಹಿತಿ ಹಂಚಿಕೊಳ್ಳಲು ಕೋರಲಾಗಿದೆ.
WhatsApp: +91 8799711259
Email: factcheck@pib.gov.in




