ಚೆನ್ನೈ: ಟ್ಯಾಸ್ಮ್ಯಾಕ್(ಖಿಂSಒಂಅ) ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ತಮಿಳುನಾಡಿನ ಹಲವೆಡೆ ಶುಕ್ರವಾರ ಮತ್ತೆ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಟ್ಯಾಸ್ಮ್ಯಾಕ್ ಅಧಿಕಾರಿಗಳು ಮತ್ತು ಏಜೆಂಟ್‌ಗಳಿಗೆ ಸಂಬಂಧಿಸಿದ ಸುಮಾರು 10 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಖಿಂSಒಂಅ ಸರ್ಕಾರಿ ಸಂಸ್ಥೆಯಾಗಿದ್ದು, ರಾಜ್ಯದಲ್ಲಿ ಮದ್ಯ ವ್ಯಾಪಾರದ ಮೇಲೆ ಏಕಸ್ವಾಮ್ಯ ಹೊಂದಿದೆ. ಟೆಂಡರ್ ಪ್ರಕ್ರಿಯೆಗಳಲ್ಲಿ ₹1,000 ಕೋಟಿ ವಂಚನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಪ್ರಕರಣ ಸಂಬಂಧ ಮಾರ್ಚ್‌ನಲ್ಲಿ ಇಡಿ ದಾಳಿ ನಡೆಸಿತ್ತು.





