ಕೋಝಿಕೋಡ್: ಭಾರಿ ಮಳೆಯ ಹಿನ್ನೆಲೆಯಲ್ಲಿ, 11 ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಪಟ್ಟಣಂತಿಟ್ಟ, ಕೊಟ್ಟಾಯಂ, ಎರ್ನಾಕುಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ ನೀಡಲಾಗಿದೆ.
ಕಣ್ಣೂರು ಮತ್ತು ಕೋಝಿಕೋಡ್ ಜಿಲ್ಲೆಗಳಲ್ಲಿ, ಶಾಲೆಗಳು, ಅಂಗನವಾಡಿಗಳು, ಧಾರ್ಮಿಕ ಶಿಕ್ಷಣ ಸಂಸ್ಥೆಗಳು ಮತ್ತು ಬೋಧನಾ ಕೇಂದ್ರಗಳಿಗೆ ಮಾತ್ರ ರಜೆ ನೀಡಲಾಗಿದೆ. ವೃತ್ತಿಪರ ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ.
ಪಟ್ಟಣಂತಿಟ್ಟ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿನ ವಸತಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಇಲ್ಲ. ಆಲಪ್ಪುಳದಲ್ಲಿನ ಕುಟ್ಟನಾಡ್ ತಾಲ್ಲೂಕಿನ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.





