HEALTH TIPS

ಮೋದಿಯವರ 11 ವರ್ಷಗಳ ಆಡಳಿತ ರಾಜಕೀಯ ಸಂಸ್ಕೃತಿಯನ್ನೇ ಬದಲಿಸಿದೆ; ನಡ್ಡಾ

ನವದೆಹಲಿ: ಪ್ರಧಾನಿಯಾಗಿ ನರೇಂದ್ರ ಮೋದಿಯವರ 11 ವರ್ಷಗಳ ಆಡಳಿತವನ್ನು ಹೊಗಳಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮೋದಿಯವರ ನಾಯಕತ್ವದಲ್ಲಿ ಸರ್ಕಾರ ಮಾಡಿರುವ ಕೆಲಸಗಳನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು ಎಂದಿದ್ದಾರೆ.

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಜವಾಬ್ದಾರಿಯುತ ಆಡಳಿತವನ್ನು ಒದಗಿಸುವ ಮೂಲಕ ದೇಶದ ರಾಜಕೀಯ ಸಂಸ್ಕೃತಿಯನ್ನು ಬದಲಾಯಿಸಿದರು.

ಕಾರ್ಯಕ್ಷಮತೆ ಮತ್ತು ಉತ್ತಮ ಆಡಳಿತದ ರಾಜಕೀಯವನ್ನು ಪ್ರಾರಂಭಿಸಿದರು. ಆದರೆ, ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತಾವಧಿಯು ಭ್ರಷ್ಟಾಚಾರ, ಹಗರಣಗಳು ಮತ್ತು ಓಲೈಕೆ ರಾಜಕೀಯದಿಂದ ಗುರುತಿಸಲ್ಪಟ್ಟಿತ್ತು ಎಂದು ಅವರು ದೂರಿದ್ಧಾರೆ.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕಳೆದ 11 ವರ್ಷಗಳಲ್ಲಿ ಕೇಂದ್ರ ಸರ್ಕಾರ ಅದ್ಭುತ ಕೆಲಸಗಳನ್ನು ಮಾಡಿದ್ದು, ಅದನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು ಎಂದು ಅವರು ಬಣ್ಣಿಸಿದ್ದಾರೆ.

ಆಪರೇಷನ್ ಸಿಂಧೂರ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕುರಿತ ಹೇಳಿಕೆಗಳ ಬಗ್ಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ನಡ್ಡಾ ತರಾಟೆಗೆ ತೆಗೆದುಕೊಂಡಿದ್ದಾರೆ. ಆಧಾರರಹಿತ ಪ್ರಶ್ನೆಗಳನ್ನು ಕೇಳುವ ಮೂಲಕ ಬೇಜವಾಬ್ದಾರಿ ವಿಪಕ್ಷ ನಾಯಕನಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಗೆ ದೇವರು ಒಳ್ಳೆಯ ಪ್ರಜ್ಞೆ ನೀಡಲೆಂದು ಆಶಿಸುತ್ತೇನೆ ಎಂದು ಅವರು ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲು ವಿಫಲವಾದ ಬಗ್ಗೆ ವಿಪಕ್ಷಗಳು ಕೇಳುತ್ತಿರುವ ಪ್ರಶ್ನೆ ಕುರಿತಂತೆ ಉತ್ತರಿಸಿದ ಅವರು, ಮೋದಿ ಸರ್ಕಾರ ಈ ಅವಧಿ ಪೂರ್ಣಗೊಳಿಸುವುದಲ್ಲದೆ, ಮುಂದೆಯೂ ಅಧಿಕಾರಕ್ಕೆ ಬರಲಿದೆ ಎಂದರು.

ಪ್ರಧಾನಿ ಮೋದಿ ಅವರು ಜನರಿಗೆ ಸ್ಪಂದಿಸುವ ಮತ್ತು ಬಲಿಷ್ಠ ಸರ್ಕಾರವನ್ನು ಒದಗಿಸಿದ್ದಾರೆ ಎಂದು ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ. ನಮ್ಮ ಸರ್ಕಾರ ತೆಗೆದುಕೊಂಡ ದಿಟ್ಟ ನಿರ್ಧಾರಗಳಲ್ಲಿ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದಿರುವುದುದು, ತ್ರಿವಳಿ ತಲಾಕ್ ರದ್ದತಿ, ವಕ್ಫ್ ಕಾಯ್ದೆ ತಿದ್ದುಪಡಿ, ನೋಟು ರದ್ದತಿ, ಮಹಿಳಾ ಕೋಟಾ ಮಸೂದೆ ಮುಂತಾದವು ಸೇರಿವೆ ಎಂದಿದ್ದಾರೆ.

2014ಕ್ಕಿಂತ ಮೊದಲು, ಹಿಂದಿನ ಯುಪಿಎ ಸರ್ಕಾರವು ಭ್ರಷ್ಟಾಚಾರದಿಂದ ತುಂಬಿತ್ತು. ದೇಶದಾದ್ಯಂತ ನಕಾರಾತ್ಮಕ ಭಾವನೆ ಇತ್ತು. ಆದರೆ, 2014ರ ನಂತರ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ, ಆ ಭಾವನೆ ಬದಲಾಯಿತು. ಈಗ ಜನರು ಹೆಮ್ಮೆಯಿಂದ, 'ಮೋದಿ ಇದ್ದರೆ ಎಲ್ಲವೂ ಸಾಧ್ಯ' ಎಂದು ಹೇಳುತ್ತಿದ್ದಾರೆ ಎಂದು ನಡ್ಡಾ ಹೇಳಿದ್ದಾರೆ.

2024ರ ಜೂನ್ 9ರಂದು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದರು. ನೋದಿ ಅಧಿಕಾರಕ್ಕೆ ಬಂದು ಇಂದಿಗೆ 11 ವರ್ಷಗಳಾಗಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries