HEALTH TIPS

'ಕನ್ನಡದ ನಡಿಗೆ ಶಾಲೆಯ ಕಡೆಗೆ' 14ರಂದು ದೇಲಂಪಾಡಿಯಿಂದ ಅಭಿಯಾನಕ್ಕೆ ಚಾಲನೆ

ಕಾಸರಗೋಡು: ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಕಾಸರಗೋಡು ಜಿಲ್ಲೆಯ ಸುಮಾರು 20 ಶಾಲೆಗಳಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ರಚನಾ ತರಬೇತಿ ಅಭಿಯಾನವಾದ, 'ಕನ್ನಡದ ನಡಿಗೆ ಶಾಲೆಯ ಕಡೆಗೆ' ಯೋಜನೆಯ ಉದ್ಘಾಟನೆ ಜೂನ್ 14ರಂದು ಬೆಳಗ್ಗೆ 10ಕ್ಕೆ ದೇಲಂಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ. 

ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಕನ್ನಡ ಧ್ವಜವನ್ನು ಪರಿಷತ್ತಿನ ಸ್ಥಾಪಕ ಸಂಚಾಲಕ ಡಾ. ಕೆ ವಾಮನ್ ರಾವ್ ಬೇಕಲ್ ಹಾಗೂ ಪರಿಷತ್ತಿನ ಜಿಲ್ಲಾಧ್ಯಕ್ಷ ವಿರಾಜ್ ಅಡೂರು ಅವರಿಗೆ ಹಸ್ತಾಂತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡುವರು.  ಯೋಜನೆಯನ್ವಯ ಕಾಸರಗೋಡು ಜಿಲ್ಲೆಯ ಆಯ್ದ ಶಾಲೆಗಳಲ್ಲಿ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವ ಏಕದಿನ ಶಿಬಿರ ಹಾಗೂ ಚಿತ್ರ ರಚನಾ ಕಾರ್ಯಾಗಾರಗಳು ಈ ಶೈಕ್ಷಣಿಕ ಅವಧಿಯಲ್ಲಿ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries