ಹಾಥರಸ್: ಉತ್ತರ ಪ್ರದೇಶದ ಮುರ್ಸಾನ್ ಬಳಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ 14 ವರ್ಷದ ಬಾಲಕನ ವಿರುದ್ಧ ಎಫ್‌ಐಅರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಸಾಯಂಕಾಲದ ವೇಳೆ ತೋಟದ ಕೊಳವೆಬಾವಿ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಪಕ್ಕದ ಊರಿನ ಬಾಲಕನು ಹೊಲಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಹೇಳಿದ್ದಾರೆ.
ಕಾಣೆಯಾದ ಮಗಳನ್ನು ಹುಡುಕಿಕೊಂಡು ಪೋಷಕರು ತೆರಳಿದಾಗ, ಬಾಲಕಿಯು ಗಾಯಗೊಂಡ ಸ್ಥಿತಿಯಲ್ಲಿ ಹೊಲದಲ್ಲಿ ಪತ್ತೆಯಾಗಿದ್ದಾಳೆ.
ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ಶೋಧ ನಡೆಯುತ್ತಿದೆ ಎಂದಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.




