ಉಪ್ಪಳ: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಗಡಿ ನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಕಲ್ಕೂರ ಪ್ರತಿಷ್ಠಾನ ಮಂಗಳೂರು, ಗ್ರೀನ್ ಸ್ಟಾರ್ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ಕಯ್ಯಾರ್ 16ನೇ ವಾರ್ಡ್ ಕಯ್ಯಾರ್ ಕುಟುಂಬ ಶ್ರೀ ಘಟಕಗಳ ಸಹಯೋಗದಲ್ಲಿ ನಾಡೋಜ ಡಾ.ಕಯ್ಯಾರ ಕಿಞಣ್ಣ ರೈ ಜನ್ಮದಿನಾಚರಣೆ, ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜೂ.18ರಂದು ಬೆಳಗ್ಗೆ 9ರಿಂದ ಕಯ್ಯಾರ್ ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10ಕ್ಕೆ ಆರಂಭವಾಗುವ ಸಭಾ ಕಾರ್ಯಕ್ರಮವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸುವರು. ಕಲ್ಕೂರ ಫೌಂಡೇಶನ್ ಮಂಗಳೂರು ಅಧ್ಯಕ್ಷ, ಗ.ಸಾ.ಸಾ.ಅಕಾಡೆಮಿ ಕಾಸರಗೋಡು ಸಂಸ್ಥಾಪಕ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡುವರು. ಬಹುಭಾಷಾ ಕವಿ, ಸಾಹಿತಿ ಮೊಹಮ್ಮದ್ ಬಡ್ಡೂರು ಸಂಸ್ಮರಣಾ ಭಾಷಣ ಮಾಡುವರು.
ಕಾಸರಗೋಡು ಸರ್ಕಾರಿ ಕಾಲೇಜು ನಿವೃತ್ತ ಕನ್ನಡ ಪ್ರಾಧ್ಯಾಪಕ, ಜಾನಪದ ವಿದ್ವಾಂಸ, ಯಕ್ಷಗಾನ ಗೊಂಬೆಯಾಟ ಕಲಾವಿದ ಪೆÇ್ರ.ಎ.ಶ್ರೀನಾಥ್ ಅವರಿಗೆ "ಕಯ್ಯಾರ" ಪ್ರಶಸ್ತಿ ಪ್ರದಾನಿಸಲಾಗುವುದು. ಕೊಂಕಣಿ ಗಾಯಕ, ದುಬೈನ ಸಾಹಿತ್ಯ ಸಂಘಟಕ ಜೋಸಫ್ ಮಾಥಿಯಾಸ್ ಅವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಪೈವಳಿಕೆ ಗ್ರಾಪಂ ಅಧ್ಯಕ್ಷೆ ಜಯಂತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಮಂಗಳೂರು ಅಧ್ಯಕ್ಷ ಉಮರ್ ಯು.ಎಚ್., ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಂಗಳೂರು ಅಧ್ಯಕ್ಷ ಸ್ಕ್ಯಾನಿ ಆಳ್ವಾರೀಸ್, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ, ಮಡಿಕೇರಿ ಅಧ್ಯಕ್ಷ ಸದಾನಂದ ಮಾವಜಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜಾಣಗೆರೆ ವೆಂಕಟರಾಮಯ್ಯ, ಡಾ ಎಂ ಎಸ್ ಮಧಭಾವಿ, ಅಶೋಕ್ ಚಂದರಗಿ, ಭಗತ್ ರಾಜ್ ನಿಜಾಮ್ ಕರ್, ಎ.ಆರ್.ಸುಬ್ಬಯ್ಯಕಟ್ಟೆ, ಡಾ.ಸಂಜೀವ ಕುಮಾರ್ ಅತಿವಾಲೆ, ಶಿವರಡ್ಡಿ ಖ್ಯಾಡೇದ್, ಪೈವಳಿಕೆ ಗ್ರಾಪಂ ಉಪಾಧ್ಯಕ್ಷೆ ಪುಷ್ಪಲಕ್ಷ್ಮಿ, ಮಂಜೇಶ್ವರ ಬ್ಲಾಕ್ ಪಂ.ಸದಸ್ಯೆ ಫಾತಿಮತ್ ಝೌರ, ಕವಿತಾ ಕುಟೀರ ಪೆರಡಾಲ ಕಾರ್ಯದರ್ಶಿ ಡಾ.ಪ್ರಸನ್ನ ರೈ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ ತೊಟ್ಟೆತ್ತೋಡಿ, ಪಿಲಿನಲಿಕೆ ಪ್ರತಿಷ್ಠಾನ ಮಂಗಳೂರು ಉಪಾಧ್ಯಕ್ಷ ವಿಕಾಸ್ ಶೆಟ್ಟಿ ಟಿ.ಡಿ., ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶ್ರೀಧರ ಹೊಳ್ಳ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಕಾರ್ಯದರ್ಶಿ ಮಂಜುನಾಥ ಆಳ್ವ ಮಡ್ವ, ದುಬೈ ಗಡಿನಾಡ ಉತ್ಸವ ಸಮಿತಿ ಕಾರ್ಯದರ್ಶಿ ಅಶ್ರಫ್ ಪಿ.ಪಿ. ಬಾಯಾರ್, ಸಮಾಜ ಸೇವಕ ಕೃಷ್ಣಪ್ಪ ಪೂಜಾರಿ ದೇರಂಬಳ, ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ರತ್ನಾಕರ ಅರಿಯಾಲ, ಸಮಾಜಸೇವಕ ಕೆ.ಪಿ.ನಾರಾಯಣ ಪಟ್ಲ, ವೆಂಕಪ್ಪ ಮಾಸ್ಟರ್ ಕಯ್ಯಾರ್, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಗಸಾಸಾ ಅಕಾಡೆಮಿ ಕಾಸರಗೋಡು ಅಧ್ಯಕ್ಷ ಚನಿಯಪ್ಪನಾಯ್ಕ್, ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮ
ಡಾ.ನಾಗೇಶ್ ಕೆ.ಎನ್. ಅವರಿಂದ ನಾಡಗೀತೆ ಮತ್ತು ಕನ್ನಡ ಗೀತೆಗಳ ಗಾಯನ, ಗಂಗಾ ಯಶಸ್ವಿನಿ ಮತ್ತು ತಂಡದ ಸಮೂಹ ಶಾಸ್ತ್ರೀಯ ಭರತನಾಟ್ಯ
ರೇಖಾಶ್ರೀ ಮತ್ತು ತಂಡದ ಸಮೂಹ ಶಾಸ್ತ್ರೀಯ ಕಥಕ್ ನೃತ್ಯ, ಮಾರುತಿ ಮತ್ತು ತಂಡದ ಚೆಂಡೆ ವಾದನ, ಚೇತನ್ ಮತ್ತು ತಂಡದ ಸಮೂಹ ಜಾನಪದ ನೃತ್ಯ, ಪೃಥ್ವಿ ಮತ್ತು ತಂಡದ ಸಮೂಹ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ ನಡೆಯಲಿದೆ.



