ಕಾಸರಗೋಡು: ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ 'ಸ್ಮøತಿ ಸಂಗಮ' ಕಾರ್ಯಕ್ರಮ ಜೂ. 25 ರಂದು ಬೆಳಗ್ಗೆ10ಕ್ಕೆ ಕಾಸರಗೋಡು ನಗರಸಭಾಂಗಣದಲ್ಲಿ ಜರುಗಲಿದೆ. 1975ರ ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ಸಂರಕ್ಷಣಾ ಹೋರಾಟ ಸ್ಮರಣ ಸಮಿತಿ ಕಾಸರಗೋಡು ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗುವುದು.
ಗೋವಾ ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೆ ಸಮಾರಂಭ ಉದ್ಘಾಟಿಸುವರು. ಕೇರಳ ಸರ್ಕಾರದ ನಿವೃತ್ತ ಕಾರ್ಯದರ್ಶಿ, ಗೋಪಾಲಕೃಷ್ಣ ಭಟ್ ಐಎಎಸ್ ಅಧ್ಯಕ್ಷತೆ ವಹಿಸುವರು. ಸಂಸ್ಕøತ ಭಾರತಿ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷ ದಿನೇಶ್ ಕಾಮತ್ ಮುಖ್ಯ ಭಾಷಣ ಮಾಡುವರು.

.jpg)
