ಕುಂಬಳೆ : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, 'ಕನ್ನಡದ ನಡಿಗೆ ಶಾಲೆಯ ಕಡೆಗೆ" ಶೈಕ್ಷಣಿಕ ಶಿಬಿರದ 2ನೇ ಕಾರ್ಯಕ್ರಮ ಜೂ. 28 ರಂದು ಬೆಳಗ್ಗೆ 10 ರಿಂದ ಕುಂಬಳೆ ಸಮೀಪದ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಆರಿಕ್ಕಾಡಿ ಕಾರ್ಳೆ ಕಾಳಿಕಾಂಬಾ ದೇವಸ್ಥಾನದ ತಂತ್ರಿವರ್ಯ ಬ್ರಹ್ಮಶ್ರೀ ಪುರೋಹಿತ ಕೆ. ರಾಮಕೃಷ್ಣ ಆಚಾರ್ಯ ಉದ್ಘಾಟಿಸುವರು. ಸಂಘಟನೆಯ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ವಿ. ಬಿ ಕುಳಮರ್ವ ಅಧ್ಯಕ್ಷತೆ ವಹಿಸುವರು. ಸೂರಂಬೈಲು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುನೀತಾ ಎ, ಸೂರಂಬೈಲ್ ಶಾಲೆಯ ಪಿಟಿಎ ಅಧ್ಯಕ್ಷ ಬಾಬು ಮಾಸ್ತರ್ ಪಿ. ಶುಭ ಹಾರೈಸುವರು. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿಗಳಾದ ಶಿಕ್ಷಣ ತಜ್ಞ ವಿ ಬಿ ಕುಳಮರ್ವ, ಡಾ. ಕೊಳ್ಚಪ್ಪೆ ಗೋವಿಂದ ಭಟ್, ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕ ಚಂದ್ರಶೇಖರ ಡಿ, ಸಂಘಟನೆಯ ಕಾರ್ಯದರ್ಶಿ ದೇವರಾಜ್ ಆಚಾರ್ಯ ಸೂರಂಬೈಲ್, ಸದಸ್ಯರಾದ ಶಿಕ್ಷಕಿ ಚಿತ್ರಕಲಾ ದೇವರಾಜ ಆಚಾರ್ಯ ಸೂರಂಬೈಲ್, ದರ್ಶಿನ್ ಚಿರಾಲ್ ಡಿ, ಧನ್ವಿಕಾ ಡಿ ಮೊದಲಾದವರು ಸಹಕರಿಸುವರು.




.jpg)
