HEALTH TIPS

ಸೇನಾ ಶಿಬಿರದ ಮೇಲೆ ಭೂಕುಸಿತ: 3 ಸೇನಾ ಸಿಬ್ಬಂದಿ ಮೃತ, 6 ಸೈನಿಕರು ನಾಪತ್ತೆ

ಗ್ಯಾಂಗ್ಟಾಕ್: ಸಿಕ್ಕಿಂನ ಛಾಟೆನ್ ಬಳಿಯ ಸೇನಾ ಶಿಬಿರದ ಬಳಿ ಸಂಭವಿಸಿದ ಭೂಕುಸಿತದಲ್ಲಿ 3 ಸೇನಾ ಸಿಬ್ಬಂದಿ ಮೃತಪಟ್ಟಿದ್ದು,6 ಸೈನಿಕರು ನಾಪತ್ತೆಯಾಗಿದ್ದಾರೆ‌ ಎಂದು ರಕ್ಷಣಾ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು. 

ಮಂಗನ್ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ ಎಂದು ಹೇಳಿದರು.

ಭೂಕುಸಿತ ಸಂಭವಿಸಿದ ಜಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡಲಾಗಿದೆ. ಸ್ಥಳದಲ್ಲಿ 3 ಮೃತದೇಹಗಳು ಪತ್ತೆಯಾಗಿದ್ದು,

ಮೃತರನ್ನು ಹವಾಲ್ದಾರ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು ಪೋರ್ಟರ್ ಅಭಿಷೇಕ್ ಲಖಾಡ ಎಂದು ಗುರುತಿಸಲಾಗಿದೆ.‌ ಕೆಲವು ಸೈನಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದರು.

ಘಟನೆ ನಡೆದ ಸ್ಥಳದಲ್ಲಿ 6 ಸೈನಿಕರು ನಾಪತ್ತೆಯಾಗಿದ್ದು, ರಕ್ಷಣಾ ಪಡೆಯು ಅವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದೆ ಎಂದರು.

ಮೃತರ ಕುಟುಂಬಗಳಿಗೆ ಸೇನೆಯು ತೀವ್ರ ಸಂತಾಪ ಸೂಚಿಸಿದೆ‌. ಅವರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries