ಕಾಸರಗೋಡು: ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ'ಸ್ಮøತಿ ಸಂಗಮ'ಕಾರ್ಯಕ್ರಮ ಜೂ. 25ರಂದು ಬೆಳಗ್ಗೆ 10.30ಕ್ಕೆ ಕಾಸರಗೋಡು ನಗರಸಭಾಂಗಣದಲ್ಲಿ ಜರುಗಲಿದೆ. 1975ರ ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ಸಂರಕ್ಷಣಾ ಹೋರಾಟ ಸ್ಮರಣ ಸಮಿತಿ ಕಾಸರಗೋಡು ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸಮನ್ವಯ ಸಮಿತಿ ರಾಜ್ಯ ಸದಸ್ಯ ವಿ. ರವೀಂದ್ರನ್ ಸುದ್ದಿಗೋಷ್ಠೀಯಲ್ಲಿ ತಿಳಿಸಿದ್ದಾರೆ.
ಗೋವಾ ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೆ ಸಮಾರಂಭ ಉದ್ಘಾಟಿಸುವರು. ಕೇರಳ ಸರ್ಕಾರದ ನಿವೃತ್ತ ಕಾರ್ಯದರ್ಶಿ, ಗೋಪಾಲಕೃಷ್ಣ ಭಟ್ ಐಎಎಸ್ ಅಧ್ಯಕ್ಷತೆ ವಹಿಸುವರು. ಸಂಸ್ಕøತ ಭಾರತಿ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷ ದಿನೇಶ್ ಕಾಮತ್ ಮುಖ್ಯ ಭಾಷಣ ಮಾಡುವರು. ಇಂದಿರಾಗಾಂಧಿಯ ಕಿರಾತಕ ಆಡಳಿತದಿಂದ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಕಪ್ಪು ಚುಕ್ಕೆಯಾಗಿದೆ. ತುರ್ತು ಪರಿಸ್ಥಿತಿ ವಿರುದ್ಧ ಕಾಸರಗೋಡು ತಾಲೂಕಿನಲ್ಲಿ ಅಂದು ನಡೆಸಲಾಗಿದ್ದ ಪ್ರತಿಭಟನೆ ದೇಶದ ಗಮನಸೆಳೆಯಲು ಕಾರಣವಾಗಿತ್ತು. ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ನಡೆಸಿ ಜೈಲುಶಿಕ್ಷೆ ಅನುಭವಿಸಿದವರು, ಕ್ರೂರ ಚಿತ್ರಹಿಂಸೆಗೆ ಒಳಗಾದವರು ಮತ್ತು ಪ್ರಜಾಪ್ರಭುತ್ವ ಕಾರ್ಯಕರ್ತರು ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭ 'ತುರ್ತು ಪರಿಸ್ಥಿತಿ- 50 ವರ್ಷಗಳ ಪ್ರಜಾಪ್ರಭುತ್ವ ಹತ್ಯೆ' ಎಂಬ ಪುಸ್ತಕವನ್ನು ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೆ ಬಿಡುಗಡೆಗೊಳಿಸುವರು ಎಂದು ತಿಳಿಸಿದರು. ಸುದ್ದಿಗೋಷ್ಠೀಯಲ್ಲಿ ಕಾರ್ಯಕ್ರಮ ಸಂಯೋಜಕ ವಕೀಲ ಕರುಣಾಕರನ್ ನಂಬಿಯಾರ್ ಉಪಸ್ಥಿತರಿದ್ದರು.





