ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ (ಎನ್‌ಡಿಆರ್‌ಎಫ್ ) 6 ತುಕಡಿಗಳು, ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) 2 ತುಕಡಿಗಳು ಸ್ಥಳಕ್ಕೆ ಆಗಮಿಸಿವೆ.
ಅಹಮದಾಬಾದ್ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್‌ಇಂಡಿಯಾ AI 171 ವಿಮಾನ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
ವಿಮಾನದಲ್ಲಿ 242 ಮಂದಿ ಪ್ರಯಾಣಿಕರಿದ್ದರು ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ.
ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದನ ಕೃತ್ಯ ನಿಗ್ರಹಕ್ಕೆ ಒದಗಿಸುವ ಕೇಂದ್ರ ಕೈಗಾರಿಕಾ ಭದ್ರತಾ ತುಕಡಿ (CISF) ಸಿಬ್ಬಂದಿ, ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.




