HEALTH TIPS

ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ; ಪೈಲಟ್ ಸೇರಿ 7 ಮಂದಿ ಸಾವು

ಡೆಹರಾಡೂನ್: ಉತ್ತರಾಖಂಡದ ಕೇದಾರನಾಥ ದೇವಾಲಯದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ, ಪೈಲಟ್ ಸೇರಿ ಅದರಲ್ಲಿದ್ದ 7 ಮಂದಿ ಸಾವಿಗೀಡಾಗಿದ್ದಾರೆ.

ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಗೌರಿಕುಂಡ ಬಳಿಯ ಅರಣ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಪಿಟಿಐಗೆ ಮಾಹಿತಿ ನೀಡಿದ್ದಾರೆ.

ಹೆಲಿಕಾಪ್ಟರ್‌ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್‌ನವರು. ಪರಿಹಾರ ಮತ್ತು ರಕ್ಷಣಾ ಕಾರ್ಯದ ದೃಷ್ಟಿಯಿಂದ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ಘಟನೆಯ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (ಯುಸಿಎಡಿಎ) ತಿಳಿಸಿದೆ.

ಬೆಳಿಗ್ಗೆ 5:30ರ ಸುಮಾರಿಗೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟಿದ್ದ ಹೆಲಿಕಾಪ್ಟರ್ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ.

ಆರ್ಯನ್ ಏವಿಯೇಷನ್ ​​ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಹೆಲಿಕಾಪ್ಟರ್ ಕೇದಾರಘಾಟಿಯ ಗೌರಿಕುಂಡ ಮತ್ತು ತ್ರಿಜುಗಿನಾರಾಯಣ್ ನಡುವಿನ ಅರಣ್ಯದಲ್ಲಿ ಪತನವಾಗಿಿ ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಇತರ ಸಂಸ್ಥೆಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಅಹಬಾದ್‌ನಿಂದ ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ 241 ಜನರು ಸೇರಿ 271 ಮಂದಿ ಮೃತಪಟ್ಟು ಕೆಲವು ದಿನಗಳ ನಂತರ ಮತ್ತೊಂದು ಅವಘಡ ಸಂಭವಿಸಿದೆ.

ಇದಕ್ಕೂ ಮೊದಲು, ಮೇ 8 ರಂದು, ಗಂಗೋತ್ರಿ ಧಾಮ್‌ಗೆ ಹೋಗುತ್ತಿದ್ದ ಹೆಲಿಕಾಪ್ಟರ್ ಉತ್ತರಕಾಶಿ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ, ಆರು ಜನರು ಮೃತಪಟ್ಟಿದ್ದರು.

ಜೂನ್ 7ರಂದು, ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ದೋಷದಿಂದಾಗಿ ರಸ್ತೆಯಲ್ಲಿ ತುರ್ತು ಭೂಸ್ಪರ್ಶ ಮಾಡತ್ತು. ಪೈಲಟ್ ಗಾಯಗೊಂಡಿದ್ದರು. ಐವರು ಭಕ್ತರನ್ನು ರಕ್ಷಿಸಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries