HEALTH TIPS

Ahmedabad Plane Crash: ಪೈಲಟ್‌ಗಳ ತರಬೇತಿ ದಾಖಲೆ ಕೇಳಿದ ಡಿಜಿಸಿಎ

ನವದೆಹಲಿ: ಏರ್‌ ಇಂಡಿಯಾ ವಿಮಾನ ದುರಂತಕ್ಕೆ ಸಂಬಂಧಪಟ್ಟಂತೆ ಪತನವಾದ ವಿಮಾನದಲ್ಲಿದ್ದ ಪೈಲಟ್‌ಗಳ ತರಬೇತಿ ದಾಖಲೆ ಮತ್ತು ಪ್ರಯಾಣದ ವೇಳಾಪಟ್ಟಿಯ ಸಮಗ್ರ ವಿವರ ನೀಡುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.

ತನಿಖೆಯ ಭಾಗವಾಗಿ ಮಾಹಿತಿ ಕೇಳಲಾಗಿದೆ ಎಂದು ಡಿಜಿಸಿಎ ಹೇಳಿದೆ.

ಸೋಮವಾರದೊಳಗೆ ದಾಖಲೆ ಸಲ್ಲಿಸುವಂತೆ ಏರ್‌ ಇಂಡಿಯಾಕ್ಕೆ ತಿಳಿಸಿದೆ.

ಅಲ್ಲದೇ, ದೇಶದಲ್ಲಿ ಕಾರ್ಯಾಚರಿಸುತ್ತಿರುವ ವಿಮಾನಯಾನ ಸಂಸ್ಥೆಗಳು, ಸುರಕ್ಷತೆ ಮತ್ತು ಕಾರ್ಯಾಚರಣೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.

ಜೂನ್‌ 12ರಂದು ಅಹಮದಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣದಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ 241 ಮಂದಿ ಸೇರಿ ಕನಿಷ್ಠ 271 ಜನ ಮೃತಪಟ್ಟಿದ್ದರು.

ಪತನವಾದ ವಿಮಾನದಲ್ಲಿದ್ದ ಕ್ಯಾಪ್ಟನ್ ಸುಮೀತ್ ಪುಷ್ಕರಾಜ್‌ ಸಭರ್ವಾಲ್ ಅವರು 8,200 ಗಂಟೆಗಳ ವಿಮಾನ ಹಾರಾಟದ ಅನುಭವ ಹೊಂದಿದ್ದ ಲೈನ್ ಟ್ರೈನಿಂಗ್ ಕ್ಯಾಪ್ಟನ್ (LTC) ಆಗಿದ್ದರು. ಸಹ ಪೈಲಟ್ ಕ್ಲೈವ್‌ ಕುಂದರ್ 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು ಎಂದು ಈ ಹಿಂದೆ ಸರ್ಕಾರ ತಿಳಿಸಿತ್ತು.

ಇಂದು(ಮಂಗಳವಾರ) ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ಅಂತ್ಯಕ್ರಿಯೆ ಮುಂಬೈನಲ್ಲಿ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries