HEALTH TIPS

ಅಹಮದಾಬಾದ್ ವಿಮಾನ ದುರಂತ: Air Indiaದಿಂದ ಮಧ್ಯಂತರ ಪರಿಹಾರ ₹25 ಲಕ್ಷ ಬಿಡುಗಡೆ

ಮುಂಬೈ: ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಮಧ್ಯಂತರ ಪರಿಹಾರವಾಗಿ ತಲಾ ₹25 ಲಕ್ಷ ಬಿಡುಗಡೆ ಮಾಡಿರುವುದಾಗಿ ಏರ್‌ ಇಂಡಿಯಾ ಹೇಳಿದೆ. 

ಏರ್ ಇಂಡಿಯಾದ ಮಾತೃಸಂಸ್ಥೆಯಾದ ಟಾಟಾ ಸನ್ಸ್‌ ಈಗಾಗಲೇ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ಘೋಷಿಸಿದೆ.

ಇದರೊಂದಿಗೆ ಹೆಚ್ಚುವರಿಯಾಗಿ ₹25ಲಕ್ಷ ಮಧ್ಯಂತರ ಪರಿಹಾರ ಲಭಿಸಲಿದೆ.

'ಜೂನ್‌ 20ರಿಂದ ಮಧ್ಯಂತರ ಪರಿಹಾರ ವಿತರಣೆ ಆರಂಭವಾಗಿದೆ. ಇದುವರೆಗೆ 6 ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ. ಮೃತಪಟ್ಟ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಪರಿಹಾರ ಪಡೆಯಲು, ದಾಖಲೆಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಜೂನ್‌ 15ರಿಂದ ಸಹಾಯವಾಣಿ ಮತ್ತು 'ಏಕಗವಾಕ್ಷಿ' ಸೌಲಭ್ಯ ಆರಂಭಿಸಲಾಗಿದೆ' ಎಂದು ಏರ್‌ ಇಂಡಿಯಾ ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries