HEALTH TIPS

Air India Plane Crash: 6 ಮೃತದೇಹಗಳ ಗುರುತು ಪತ್ತೆ; ಸಂಬಂಧಿಕರಿಗೆ ಹಸ್ತಾಂತರ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿದ್ದಾರೆ.

ದುರಂತದ ನಂತರ ಕನಿಷ್ಠ 265 ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಪೈಕಿ ಆರು ಜನರ ಮುಖಗಳು ಹಾಗೆಯೇ ಇದ್ದುದರಿಂದ ಅವರನ್ನು ಮಾತ್ರ ಗುರುತಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಚಿರಾಗ್ ಗೋಸಾಯಿ ಅವರು ತಿಳಿಸಿದ್ದಾರೆ.

ಪ್ರಯಾಣಿಕರು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿರುವುದರಿಂದ ಇತರರ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ಡಿಎನ್‌ಎ ಪ್ರೊಫೈಲಿಂಗ್ ನಡೆಯುತ್ತಿದೆ ಎಂದು ಅವರು ಹೇಳಿದರು.

"ನಾವು ಆರು ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಿದ್ದೇವೆ. ಗುರುತಿಸಲಾಗದಷ್ಟು ಸುಟ್ಟ ದೇಹಗಳನ್ನು ಗುರುತಿಸಲು ಪ್ರೊಫೈಲಿಂಗ್‌ಗಾಗಿ ಸಂಬಂಧಿಕರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸುವ ಪ್ರಕ್ರಿಯೆಯನ್ನು ನಾವು ಆರಂಭಿಸಿದ್ದೇವೆ. 215 ಮೃತ ವ್ಯಕ್ತಿಗಳ ಸಂಬಂಧಿಕರು ತಮ್ಮ ಮಾದರಿಗಳನ್ನು ನೀಡಲು ನಮ್ಮನ್ನು ಸಂಪರ್ಕಿಸಿದ್ದಾರೆ" ಎಂದು ಮರಣೋತ್ತರ ಪರೀಕ್ಷೆ ಕೊಠಡಿಯ ಮೇಲ್ವಿಚಾರಣೆ ನಡೆಸುತ್ತಿರುವ ಗೋಸಾಯಿ ಅವರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆ ಕೊಠಡಿಗೆ ಆಗಮಿಸುವ ಸಂಬಂಧಿಕರಿಂದ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಮತ್ತು ಅವರನ್ನು ಅವರ ಡಿಎನ್‌ಎ ಮಾದರಿಗಳನ್ನು ಒದಗಿಸಲು ಬಿಜೆ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

"ಡಿಎನ್ಎ ಮಾದರಿಗಳನ್ನು ಹೊಂದಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಸುಮಾರು 72 ಗಂಟೆ ಬೇಕಾಗುತ್ತದೆ. ಹೊಂದಾಣಿಕೆಯಾದ ನಂತರ, ಶವಗಳನ್ನು ಮರಣೋತ್ತರ ಪರೀಕ್ಷೆ ಕೊಠಡಿಯಿಂದ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತದೆ" ಎಂದು ಇನ್ಸ್‌ಪೆಕ್ಟರ್ ಹೇಳಿದ್ದಾರೆ.

ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಜನರನ್ನು ಹೊತ್ತ ಬೋಯಿಂಗ್ 787 ಡ್ರೀಮ್‌ಲೈನರ್ (AI 171) ಗುರುವಾರ ಮಧ್ಯಾಹ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿನಗರ ಪ್ರದೇಶದ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries