HEALTH TIPS

AirIndia Flight crash Highlights: 825 ಅಡಿ ಎತ್ತರದಿಂದ ಪತನಗೊಂಡ ವಿಮಾನ!

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾಗಿದೆ. ದುರಂತಕ್ಕೀಡಾದ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರು ಇದ್ದರು ಎಂದೆನ್ನಲಾಗಿದೆ.

ಏರ್‌ ಇಂಡಿಯಾಗೆ ಸೇರಿದ AI-171 ವಿಮಾನವು ಗುರುವಾರ ಮಧ್ಯಾಹ್ನ 1.17ಕ್ಕೆ ಅಹಮದಾಬಾದ್ ವಿಮಾನನಿಲ್ದಾಣದಿಂದ ಟೇಕ್‌ಆಫ್‌ ಆಗಿತ್ತು.

  • ಪತನವಾಗುವ ಸಂದರ್ಭದಲ್ಲಿ ವಿಮಾನ ನೆಲಮಟ್ಟದಿಂದ 825 ಅಡಿ ಎತ್ತರದಲ್ಲಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ

  • ವಿಮಾನ ಪತನಗೊಂಡಿರುವ ಅಹಮದಾಬಾದ್‌ನ ಮೇಘಾನಿನಗರ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ

  • ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳನ್ನು ಮುಚ್ಚಲಾಗಿದೆ

  • ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಆಂಬುಲೆನ್ಸ್‌ಗಳು ಧಾವಿಸಿವೆ

  • ವಿಮಾನ ಅಪಘಾತದ ಕುರಿತ ಮಾಹಿತಿಯನ್ನು ಕಾಲಕಾಲಕ್ಕೆ ನೀಡುವುದಾಗಿ ಏರ್‌ಇಂಡಿಯಾ ಹೇಳಿದೆ.

  • ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್ ನಾಯ್ಡು ಅವರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ.

  • ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿ ಬಿಡುಗಡೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries