ಪೆರ್ಲ: ಸ್ವರ್ಗ ಸ್ವಾಮಿ ವಿವೇಕಾನಂದ ಎಯುಪಿ ಶಾಲೆಯಲ್ಲಿ ಗ್ರಂಥಾಲಯ ಚಳವಳಿಯ ಪಿತಾಮಹ ಪಿ.ಎನ್.ಪಣಿಕ್ಕರ್ ಅವರ ಪುಣ್ಯತಿಥಿಯ ಸ್ಮರಣಾರ್ಥ ವಾಚನಾ ವಾರಕ್ಕೆ ಗುರುವಾರ ಚಾಲನೆ ನೀಡಲಾಯಿತು. ಲೇಖಕಿ, ನಿವೃತ್ತ ಮುಖ್ಯ ಶಿಕ್ಷಕಿ ಲೀಲಾ ಮಣ್ಣಾಲ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಓದಿನ ಮಹತ್ವದ ಬಗ್ಗೆ ತಿಳಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಗೀತಾಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮಕ್ಕಳ ಚಿತ್ರಕಲೆ, ಸಾಹಿತ್ಯ ಚಟುವಟಿಕೆಗಳನ್ನು ಪೆÇ್ರೀತ್ಸಾಹಿಸುವ ಬಾಲೋದ್ಯಾನ ಯೋಜನೆಯನ್ನು ಉದ್ಘಾಟಿಸಲಾಯಿತು. ಹಿರಿಯ ಶಿಕ್ಷಕ ಸಚ್ಚಿದಾನಂದ ಮೊಗೇರು ಸ್ವಾಗತಿಸಿದರು., ವೆಂಕಟ ವಿದ್ಯಾಸಾಗರ್ ವಂದಿಸಿದರು. 7ನೇ ತರಗತಿ ವಿದ್ಯಾರ್ಥಿಗಳಾದ ಸಮೃದ್ಧ್ ಹಾಗೂ ಯಶಿತಾ ಪಿ.ಜಿ. ನಿರೂಪಿಸಿದರು.




.jpg)
