ನವದೆಹಲಿ: ಜನ ಗಣತಿಯೊಂದಿಗೆ ಜಾತಿ ಗಣತಿ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರ, ಈ ಕುರಿತ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
'ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಅಕ್ಟೋಬರ್ 2026ರಿಂದ ಮತ್ತು ದೇಶದ ಉಳಿದ ಭಾಗಗಳಲ್ಲಿ ಮಾರ್ಚ್ 2027ರಿಂದ ಜನ ಗಣತಿಯೊಂದಿಗೆ ಜಾತಿ ಗಣತಿ ನಡೆಸಲಾಗುವುದು' ಎಂದು ಗೃಹ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
'ಜನ ಗಣತಿ-2027 ಅನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಇದರೊಂದಿಗೆ ಜಾತಿ ಗಣತಿಯನ್ನು ನಡೆಸಲು ನಿರ್ಧರಿಸಲಾಗಿದೆ. ಮಾರ್ಚ್ 2027ರ ಮೊದಲ ದಿನದಿಂದಲೇ ಗಣತಿ ಕಾರ್ಯ ಪ್ರಾರಂಭವಾಗಲಿದೆ' ಎಂದು ತಿಳಿಸಿದೆ.
ಕೊನೆಯ ಜನ ಗಣಿತಿಯನ್ನು 2011ರಲ್ಲಿ ಎರಡು ಹಂತಗಳಲ್ಲಿ ನಡೆಸಲಾಗಿತ್ತು.




