ಕಾಸರಗೋಡು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಮಟ್ಟದ ಶಿಬಿರ ಕಾಸರಗೋಡಿನ ಪಾಯಿಚ್ಚಾಲ್ ಚೈತನ್ಯ ವಿದ್ಯಾಲಯ ಸಭಾಂಗಣದಲ್ಲಿ ಆರಂಭಗೊಂಡಿತು. ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಬಾಲಕೃಷ್ಣ ಶಿಬಿರ ಉದ್ಘಾಟಿಸಿದರು. ಎಬಿವಿಪಿ ರಾಜ್ಯಾಧ್ಯಕ್ಷ ಡಾ.ವೈಶಾಖ ಸದಾಶಿವನ್ ಅಧ್ಯಕ್ಷತೆ ವಹಿಸಿದ್ದರು. ಎಬಿವಿಪಿ ರಾಜ್ಯ ಕಾರ್ಯದರ್ಶಿ ಇ.ಯು.ಈಶ್ವರಪ್ರಸಾದ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ವಿಪಿನ್ ಕುಮಾರ್ ಉಪಸ್ಥಿತರಿದ್ದರು. ಶಿಬಿರವು ಜೂ. 29 ರಂದು ಸಮಾರೋಪಗೊಳ್ಳಲಿದೆ.


