ಮುಂಬೈ: ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಎಂಸಿ) ಅಮೆರಿಕದ ಕಾನ್ಸುಲೇಟ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ವ್ಯಕ್ತಿಯೊಬ್ಬ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಕಾನ್ಸುಲೇಟ್‌ಗೆ ಕರೆ ಮಾಡಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ.
ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳವನ್ನು ಪರಿಶೀಲಿಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಈ ಕುರಿತು ಪ‍್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬಿಎಂಸಿಯ ಪೊಲೀಸರು ತಿಳಿಸಿದ್ದಾರೆ.




