ಮಂಜೇಶ್ವರ : ಕೇರಳದ ಗ್ರಂಥಶಾಲಾ ಪಿತಾಮಹ ಎಂದೇ ಕರೆಯಲ್ಪಡುವ ಪಿ.ಎನ್. ಪಣಿಕ್ಕರ್ ರವರ ಚರಮ ದಿನಾಚರಣೆಯನ್ನು ವಾಚನಾ ದಿನಾಚರಣೆಯನ್ನಾಗಿ ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಚರಿಸಲಾಯಿತು.
ಕಾರ್ಯಕ್ರಮವನ್ನು ಖ್ಯಾತ ನಿರೂಪಕ, ರಂಗ ನಿರ್ದೇಶಕ ಶಶಿಕುಮಾರ್ ಕುಳೂರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಶೇಖ್ ಅಬ್ದುಲ್ ಮಜೀದ್ ಚಾರ್ಲ ರವರು ಉಪಸ್ಥಿತರಿದ್ದರು. ಶಶಿಕುಮಾರ್ ಕುಳೂರುರವರು ಶಾಲಾ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿ ಮನರಂಜಿಸಿದರು. ವಾಚನಾ ವಾರಾಚರಣೆಗೆ ಚಾಲನೆಯನ್ನೂ ನೀಡಲಾಯಿತು.
ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸೌಮ್ಯ ಪಿ. ಸ್ವಾಗತಿಸಿ, ಶಿಕ್ಷಕಿ ನಯನ ಎಂ. ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ವಾಚನಾ ವಾರಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.




.jpg)
