ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಕೇರಳದಲ್ಲಿ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಿದ್ಯಾನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಳಿಯತ್ತಡ್ಕ ಸನಿಹದ ಚೆಟ್ಟುಂಗುಳಿ ಸನಿಹ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 19185 ಪ್ಯಾಕೆಟ್ ತಂಬಾಕು ಉತ್ಪನ್ನ ವಶಪಡಿಸಿಕೊಂಡು, ನೇಶನಲ್ ನಗರ ನಿವಾಸಿ ಕಮರುದ್ದೀನ್ ಹಾಗೂ ತ್ರಕ್ಕರಿಪುರ ನಿವಾಸಿ ಮಹಮ್ಮದ್ ರಫೀಕ್ ಎಂಬವರನ್ನು ಬಂಧಿಸಲಾಗಿದೆ. ತಂಬಾಕು ಉತ್ಪನ್ನ ಸಾಗಿಸಲು ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.




