ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕಾಸರಗೋಡು ಪೆರಿಯ ಕ್ಯಾಂಪಸ್‍ನ ಯೋಗ ಅಧ್ಯಯನ ವಿಭಾಗದ ಆಶ್ರಯದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಪಯಸ್ವಿನಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಕುಲಪತಿ ಪೆÇ್ರ. ಸಿದ್ದು ಪಿ. ಅಲಗೂರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನದ ಜಾಗತಿಕ ಮಹತ್ವವನ್ನು ವಿವರಿಸಿದರು. ಯೋಗದ ಮೂಲಕ ಪ್ರಪಂಚದಾದ್ಯಂತ ದೊಡ್ಡ ಆಚರಣೆ ನಡೆಯುತ್ತಿವೆ. ಯೋಗ ಫಾರ್ ವಮ್ ಅರ್ತ್-ವನ್ ಹೆಲ್ತ್' ಎಂಬ ಧ್ಯೇಯದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ವೈಯಕ್ತಿಕ ಆರೋಗ್ಯ ಮತ್ತು ಜಾಗತಿಕ ಆರೋಗ್ಯವು ಪರಸ್ಪರ ಸಂಬಂಧ ಹೊಂದಿದೆ ಎಂಬುದನ್ನು ನಮಗೆ ನೆನಪಿಸುತ್ತದೆ. ಯೋಗವು ಪ್ರಪಂಚದಾದ್ಯಂತದ ಸಾಂಸ್ಕøತಿಕ ಪರಂಪರೆ ಮತ್ತು ಆರೋಗ್ಯ ರಕ್ಷಣೆಯ ಒಂದು ಭಾಗವಾಗಿದೆ ಎಂದು ತಿಳಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗದ ಮಾಜಿ ಅಧ್ಯಕ್ಷ ಪೆÇ್ರ. ಕೆ. ಕೃಷ್ಣ ಶರ್ಮಾ ಯೋಗ ದಿನದ ಸಂದೇಶ ನೀಡಿದರು.
ವಿಭಾಗ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಯೋಗಾಸನ ಭಾರತ್‍ನ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನವೂ ನಡೆಯಿತು. ರಿಜಿಸ್ಟ್ರಾರ್ ಡಾ.ಎಂ.ಮುರಳೀಧರನ್ ನಂಬಿಯಾರ್, ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪೆÇ್ರ.ರಾಜೇಂದ್ರ ಪಿಲಾಂಗಟ್ಟೆ, ಸ್ಕೂಲ್ ಆಫ್ ಮೆಡಿಸಿನ್ ಮತ್ತು ಪಬ್ಲಿಕ್ ಹೆಲ್ತ್ ಡೀನ್ ಪೆÇ್ರ.ಮ್ಯಾಥ್ಯೂ ಜಾರ್ಜ್ ಉಪಸ್ಥಿತರಿದ್ದರು. ಡಾ. ಸುಬ್ರಹ್ಮಣ್ಯ ಪೈಲೂರು ಸ್ವಾಗತಿಸಿದರು ಮತ್ತು ಡಾ. ಅಂಜಲಾ ದೇವಿ ವಂದಿಸಿದರು.





