ಚೆನ್ನೈ: ಲಂಡನ್‌ಗೆ ಹೊರಟಿದ್ದ ಅಂತರರಾಷ್ಟ್ರೀಯ ವಿಮಾನ ತಾಂತ್ರಿಕ ಕಾರಣಗಳಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ವಾಪಸ್ ಮರಳಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ವಿಮಾನದಲ್ಲಿ ಸುಮಾರು 209 ಪ್ರಯಾಣಿಕರಿದ್ದರು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಾಪಸ್ ಬಂದಿದೆ ಎಂದು ಅವರು ವಿವರಿಸಿದರು
ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.




