ಕೀವ್: ರಷ್ಯಾ ಅತಿದೊಡ್ಡ ವೈಮಾನಿಕ ದಾಳಿ ನಡೆಸಿದೆ ಎಂದು ಉಕ್ರೇನ್‌ನ ಅಧಿಕಾರಿಯೊಬ್ಬರು ಇಂದು (ಭಾನುವಾರ) ಹೇಳಿದ್ದಾರೆ.
ಯುದ್ಧ ಆರಂಭವಾದ ಬಳಿಕ ರಷ್ಯಾ ರಾತ್ರೋರಾತ್ರಿ ನಡೆಸಿದ ಬೃಹತ್ ದಾಳಿ ಇದಾಗಿದೆ ಎಂದು ಹೇಳಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ 537 ವೈಮಾನಿಕ ದಾಳಿಗಳನ್ನು ನಡೆಸಿದೆ.
ಇವುಗಳಲ್ಲಿ 477 ಡ್ರೋನ್ ಹಾಗೂ 60ರಷ್ಟು ಕ್ಷಿಪಣಿಗಳು ಸೇರಿವೆ. ಈ ಪೈಕಿ 249 ಅನ್ನು ಹೊಡೆದುರುಳಿಸಲಾಯಿತು. ಇನ್ನು ಕೆಲವನ್ನು ಎಲೆಕ್ಟ್ರಾನಿಕ್ ಜಾಮರ್ ಮೂಲಕ ತಡೆಹಿಡಿಯಲಾಯಿತು ಎಂದು ಅವರು ಹೇಳಿದ್ದಾರೆ.
2022ರಲ್ಲಿ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿಯನ್ನು ರಷ್ಯಾ ಪ್ರಾರಂಭಿಸಿತ್ತು. ಅಲ್ಲದೆ ಉಕ್ರೇನ್‌ನ ಹಲವು ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ಮುಂದುವರಿಸಿದೆ.
ಶಾಂತಿ ಮಾತುಕತೆಗೆ ಸಿದ್ಧವಾಗಿದ್ದೇವೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿಕೆಯ ಬೆನ್ನಲ್ಲೇ ಈ ದಾಳಿ ನಡೆದಿದೆ ಎನ್ನಲಾಗಿದೆ.
ಮತ್ತೊಂದೆಡೆ ಉಕ್ರೇನ್‌ನ ಮೂರು ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.




