ಕಾಸರಗೋಡು: ಪೆರಿಯದ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ಪರಿಸರ ವಿಜ್ಞಾನ ವಿಭಾಗ, ಕ್ಯಾಂಪಸ್ ಅಭಿವೃದ್ಧಿ ಸಮಿತಿ ಮತ್ತು ಎಂಜಿನಿಯರಿಂಗ್ ವಿಭಾಗವು ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ "ತಾಯಿಗಾಗಿ ಗಿಡ" ಅಭಿಯಾನದ ಭಾಗವಾಗಿ 500 ಹಣ್ಣಿನ ಮರಗಳ ಸಸಿಗಳನ್ನು ನೆಡಲು ಪ್ರಾರಂಭಿಸಲಾಯಿತು.
ಉಪಕುಲಪತಿ ಪ್ರೊ. ಸಿದ್ದು ಪಿ. ಅಲ್ಗೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪರಿಸರ ದಿನಾಚರಣೆಯ ಮಹತ್ವವನ್ನು ಎತ್ತಿ ತೋರಿಸಿದ ಅವರು, ಪರಿಸರ ಸಂರಕ್ಷಣೆ ಪ್ರತಿದಿನ ಮುಂದುವರಿಯಬೇಕು ಎಂದು ಸ್ಪಷ್ಟಪಡಿಸಿದರು. ಸಸಿಗಳನ್ನು ನಿರ್ವಹಿಸಬೇಕು ಮತ್ತು ಅವು ಬೆಳೆಯುವಂತೆ ನೋಡಿಕೊಳ್ಳಬೇಕು. ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್‍ನತ್ತ ಎಲ್ಲರೂ ಶ್ರಮಿಸುವಂತೆ ಅವರು ಕೇಳಿಕೊಂಡರು.
ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಬಿಜು ಮುಖ್ಯ ಅತಿಥಿಯಾಗಿದ್ದರು. ರಿಜಿಸ್ಟ್ರಾರ್ ಡಾ. ಎಂ. ಮುರಳೀಧರನ್ ನಂಬಿಯಾರ್, ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಸುದೀಶ ಜೋಗಯ್ಯ ಮಾತನಾಡಿದರು. ಡೀನ್ ಶೈಕ್ಷಣಿಕ ಪ್ರೊ. ಅಮೃತ್ ಜಿ ಕುಮಾರ್, ಡೀನ್‍ಗಳು, ಕ್ಯಾಂಪಸ್ ಅಭಿವೃದ್ಧಿ ಅಧಿಕಾರಿ ಡಾ. ಟೋನಿ ಗ್ರೇಸ್, ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀಕಾಂತ್ ವಿ.ಕೆ, ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಇತರರು ಉಪಸ್ಥಿತರಿದ್ದರು.






