HEALTH TIPS

ಕಾಂಗ್ರೆಸ್‌ ಹಿರಿಯ ಮುಖಂಡ ತೆನ್ನಲ ಬಾಲಕೃಷ್ಣ ಪಿಳ್ಳೈ ನಿಧನ

ತಿರುವನಂತಪುರಂ: ಕಾಂಗ್ರೆಸ್‌ ಧುರೀಣ, ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಮಾಜಿ ಅಧ್ಯಕ್ಷ ತೆನ್ನಲ ಬಾಲಕೃಷ್ಣ ಪಿಳ್ಳೈ (95), ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು. 

ತೆನ್ನಲ ಬಾಲಕೃಷ್ಣ ಅವರು ಎರಡು ಬಾರಿ ಶಾಸಕರಾಗಿ, ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಎರಡು ಬಾರಿ ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ವರ್ಷಗಳಿಂದ ರಾಜಕೀಯದಿಂದ ದೂರ ಉಳಿದಿದ್ದರು.

ಕೇರಳದ ಕೊಲ್ಲಂ ಜಿಲ್ಲೆಯ ಶೂರನಾಡ್‌ ಎಂಬಲ್ಲಿ 1930ರ ಮಾರ್ಚ್‌11ರಂದು ಜನಿಸಿದ್ದ ಬಾಲಕೃಷ್ಣ ಪಿಳ್ಳೈ, ಕಾಂಗ್ರೆಸ್‌ ವಾರ್ಡ್‌ ಸಮಿತಿಯ ಅಧ್ಯಕ್ಷರಾಗಿ ರಾಜಕೀಯ ಪ್ರವೇಶಿಸಿದ್ದರು. 1977 ಮತ್ತು 1982ರಲ್ಲಿ ಅಡೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries