ಉಪ್ಪಳ: ಮಂಗಲ್ಪಾಡಿ ಪಂಚಾಯಿತಿ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಸಮಾಜಶಾಸ್ತ್ರ(ಸೀನಿಯರ್), ಪ್ರಾಣಿಶಾಸ್ತ್ರ(ಜೂನಿಯರ್)ಮತ್ತು ಉರ್ದು (ಜೂನಿಯರ್) , ಅಧ್ಯಾಪಕ ಹುದ್ದೆಗಳಿಗೆ ದಿನವೇತನ ಆಧಾರದಲ್ಲಿ ಶಿಕ್ಷಕರ ನೇಮಕಾತಿ ನಡೆಯುವುದು. ಈ ಬಗ್ಗೆ ಜೂ 5ರಂದು ಬೆಳಿಗ್ಗೆ 10.30ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನನಡೆಯಲಿದೆ. ಅರ್ಹ ಅಭ್ಯರ್ಥಿಗಳು ಅಸಲಿ ಪ್ರಮಾಣಪತ್ರದೊಂದಿಗೆ ಪ್ರಾಂಶುಪಾಲರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.






