ತಿರುವನಂತಪುರ: ಕೇರಳದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರತೀಯ ಹವಾಮಾನ ಇಲಾಖೆಯು(ಐಎಮ್‌ಡಿ) ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಬುಧವಾರ ಆರೆಂಜ್ ಅಲರ್ಟ್ ಎಂದು ಘೋಷಿಸಿದೆ.
ಕೇರಳದ ಕರಾವಳಿ ಭಾಗದಲ್ಲಿ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಕಳೆದ ಕೆಲವು ವಾರಗಳಿಂದ ಕೇರಳದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಮಳೆಯ ಪ್ರಮಾಣ 11 ಸೆಂ.ಮೀ ನಿಂದ 20 ಸೆಂ.ಮೀ ಇದ್ದರೆ ಆರೆಂಜ್ ಅಲರ್ಟ್ ಘೋಷಿಸಲಾಗುತ್ತದೆ.

