ಕಾಸರಗೋಡು: ವಾಹನ ಅಪಘಾತದ ಬಗ್ಗೆ ಮಾಹಿತಿ ಸಂಗ್ರಹಿಸಲು ತೆರಳಿದ್ದ ಎಸ್.ಐ ಹಾಗೂ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪಿ, ಪನತ್ತಡಿ ಚಾಮುಂಡಿಕುನ್ನು ನಿವಾಸಿ ಪ್ರಮೋದ್ ಎಸ್.ಸಿ ಎಂಬಾತನನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚೆರ್ಕಳದಲ್ಲಿ ಮಂಗಳವಾರ ಸಂಜೆ ಪ್ರಮೋದ್ ಚಲಾಯಿಸುತ್ತಿದ್ದ ಕಾರು ಮತ್ತು ಸ್ಕೂಟರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಕುಂಟಾರು ಪಡಿಯತ್ತಡ್ಕ ನಿವಾಸಿ ಬಿನ್‍ಶಾದ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಕರಣದ ಬಗ್ಗೆ ತನಿಖೆಗಾಗಿ ವಿದ್ಯಾನಗರ ಠಾಣೆ ಪೊಲೀಸರು ಅಪಘಾತ ಸ್ಥಳಕ್ಕೆ ತೆರಳಿದ್ದ ಸಂದರ್ಭ ಆರೋಪಿ ಪ್ರಮೋದ್ ಇವರ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಕೇಸುಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

