ಪೆರ್ಲ : ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರವೇಶೋತ್ಸವ ಕಾರ್ಯಕ್ರಮವನ್ನು ಎಣ್ಮಕಜೆ ಪಂಚಾಯಿತಿ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್ ಉದ್ಘಾಟಿಸಿದರು.
ಈ ಸಂದರ್ಭ ಎಸ್ಸೆಸೆಲ್ಸಿ ಪರೀಕ್ಷೆಯ ಎಲ್ಲಾ ವಿಷಯದಲ್ಲಿ ಎ ಪ್ಲಸ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಾರಾಯಣ ನಾಯಕ್ ನಲ್ಕ ಅಧ್ಯಕ್ಷತೆ ವಹಿಸಿದ್ದರು. ವಾರ್ಡ್ ಸದಸ್ಯೆ, ಗ್ರಾಪಂ ಉಪಾಧ್ಯಕ್ಷೆ ರಮ್ಲಾ ಇಬ್ರಾಹಿಂ, ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ವೆಂಕಟರಾಜ ಮಿತ್ರ, ಮುಖ್ಯೋಪಾಧ್ಯಾಯ ಕೇಶವ ಪ್ರಕಾಶ್ ಉಪಸ್ಥಿತರಿದ್ದರು. ಶಾಲಾ ಹಿರಿಯ ಶಿಕ್ಷಕಿಯರಾದ ವಿದ್ಯಾರತ್ಮ ಸ್ವಾಗತಿಸಿದರು. ಅಭಿಲಾಷಾ ಟೀಚರ್ ಕಾರ್ಯಕ್ರಮ ನಿರೂಪಿಸಿದರು. ಅನ್ನ ಪೂರ್ಣ ಟೀಚರ್ ವಂದಿಸಿದರು.






