ಕೀವ್: ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಪಡೆಗಳು ಶುಕ್ರವಾರ ಬೆಳಿಗ್ಗೆಯೇ ಡ್ರೋನ್ ದಾಳಿ ನಡೆಸಿವೆ. ವಿವಿಧೆಡೆ ವಸತಿ ಕಟ್ಟಡಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡ್ರೋನ್‌ಗಳು ಅಲೆಗಳಂತೆ ನಗರದತ್ತ ನುಗ್ಗುತ್ತಿವೆ.
ಅವುಗಳನ್ನು ಹಿಮ್ಮೆಟ್ಟಿಸಲು ವಾಯು ರಕ್ಷಣಾ ಘಟಕಗಳು ತೀವ್ರ ಪ್ರಯತ್ನ ಮಾಡುತ್ತಿವೆ ಎಂದು ನಗರ ಮಿಲಿಟರಿ ಆಡಳಿತದ ಮುಖ್ಯಸ್ಥ ತೈಮೂರ್ ಕಾಚೆಂಕೊ ಹೇಳಿದ್ದಾರೆ.
ರಷ್ಯಾ ಪಡೆಗಳು ನಗರದ ಮೇಲೆ ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದ್ದಾರೆ.
ಡ್ರೋನ್ ದಾಳಿ ಸ್ಥಳಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸುತ್ತಿವೆ ಎಂದು ವರದಿಯಾಗಿದೆ.






