ಮಂಜೇಶ್ವರ : ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ, ಪ್ರೀ ಪ್ರೈಮರಿ ವಿಭಾಗದ ದತ್ತು ಸ್ವೀಕಾರದೊಂದಿಗೆ ಸೋಮವಾರ ನೆರವೇರಿತು.
ಶಾಲಾ ಪ್ರವೇಶೋತ್ಸವದ ಪ್ರಯುಕ್ತ ನವಾಗತ ಮಕ್ಕಳನ್ನು ಆಕರ್ಷಕ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಗ್ರಾ.ಪಂ. ಸದಸ್ಯ ಜನಾರ್ಧನ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಅಧ್ಯಕ್ಷತೆ ವಹಿಸಿದ್ದರು. ಮೀಂಜ ಗ್ರಾಮ ಪಂಚಾಯತಿ ವಿದ್ಯಾಭ್ಯಾಸ ಹಾಗೂ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ.ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಈ ವರ್ಷದ ಪ್ರವೇಶೊತ್ಸವದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕøತ, ಶಾಲಾ ಹಳೆ ವಿದ್ಯಾರ್ಥಿ ಡಾ. ಸದಾಶಿವ ಕೆ. ಶೆಟ್ಟಿ ಕುಳೂರು ಕನ್ಯಾನ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು. ಶಾಲೆಯ ಪ್ರೀ ಪ್ರೈಮರಿ ವಿಭಾಗ (ಎಲ್.ಕೆ.ಜಿ., ಯು.ಕೆ.ಜಿ.) ವನ್ನು 5 ವರ್ಷಗಳ ಕಾಲ ದತ್ತು ಸ್ವೀಕಾರ ಮಾಡುವ ಮೂಲಕ ಮಗದೊಮ್ಮೆ ಶಾಲೆಯ ಅಭಿವೃದ್ಧಿಯ ಹರಿಕಾರರೆನಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಪರವಾಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಇತ್ತೀಚೆಗೆ ಕೇರಳ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರಿಗಿರುವ ರಾಜ್ಯ ಪ್ರಶಸ್ತಿಯನ್ನು ಪಡೆದ ಕುಳೂರು ಶಾಲಾ ಹಳೆ ವಿದ್ಯಾರ್ಥಿ ವಿಶಾಲಾಕ್ಷಿ ದೈಗೋಳಿ ಹಾಗೂ 2024-25 ನೇ ಸಾಲಿನ ಎಲ್.ಎಸ್.ಎಸ್. ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಸ್ಕಾಲರ್ ಶಿಪ್ ಗೆ ಅರ್ಹತೆ ಪಡೆದ ಕುಮಾರಿ ಹನ್ವಿಕಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಮಜಿಬೈಲ್ ಸಹಕಾರಿ ಬ್ಯಾಂಕ್ ನ ಪರವಾಗಿ ನವಾಗತ ಮಕ್ಕಳಿಗೆ ಬ್ಯಾಗ್, ಮುಂಬೈನ ಯುವ ಉದ್ಯಮಿ, ಶಾಲಾ ಹಳೆ ವಿದ್ಯಾರ್ಥಿ ಮೋಹನ್ ಶೆಟ್ಟಿಯವರು ನೀಡಿದ ಸಮವಸ್ತ್ರ ಹಾಗೂ ಶಾಲಾ ಶಿಕ್ಷಕ ವೃಂದದ ಪರವಾಗಿ ನೀಡಿದ ಕಲಿಕೋಪಕರಣಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೆÇಯ್ಯೇಲು, ಮಜಿಬೈಲ್ ಸಹಕಾರಿ ಬ್ಯಾಂಕ್ ನ ಉಪಾಧ್ಯಕ್ಷ, ಶಾಲಾ ಹಳೆ ವಿದ್ಯಾರ್ಥಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಶಾಲಾ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷ ಸತೀಶ್ ಎಲಿಯಾಣ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ನಾರಾಯಣ ನಾೈಕ್ ನಡುಹಿತ್ಲು, ಮೋಹಿನಿ ಬಿ. ಶೆಟ್ಟಿ ಮಜ್ಜಾರ್, ಶಾಲಾ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಉಷಾ ಆದರ್ಶನಗರ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಅನುಪಮ ಚಿನಾಲ ಉಪಸ್ಥಿತರಿದ್ದು ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.




.jpg)
.jpg)
.jpg)
.jpg)

