ಪೆರ್ಲ: ಸ್ವರ್ಗ ಸ್ವಾಮಿ ವಿವೇಕಾನಂದ ಎಯುಪಿ ಶಾಲೆಯ ಪ್ರವೇಶೋತ್ಸವ ಕಾರ್ಯಕ್ರಮವನ್ನು ಗ್ರಾ.ಪಂ. ಸದಸ್ಯ ರಾಮಚಂದ್ರ ಎಂ.ಸೋಮವಾರ ದೀಪ ಬೆಳಗಿಸಿ ಉದ್ಘಾಟಿಸಿದರು. ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಕಾರ್ತಿಕ್ ಶಾಸ್ತ್ರಿ ಖಂಡೇರಿ ಅಧ್ಯಕ್ಷತೆ ವಹಿಸಿದ್ದರು. ಪಾಣಾಜೆ ಸುಬೋಧ ಪ್ರೌಢಶಾಲೆಯ ನಿವೃತ್ತ ಹೆಡ್ ಕ್ಲಾರ್ಕ್ ಸದಾಶಿವ ಭಟ್ ಪಾಲ್ತಮೂಲೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ವ್ಯವಸ್ಥಾಪಕ ಹೃಷಿಕೇಶ್ ವಿ.ಎಸ್., ಮಾತೃ ಸಂಘದ ಅಧ್ಯಕ್ಷೆ ಗಾಯತ್ರಿ, ರಕ್ಷಕರು, ವಿದ್ಯಾಭಿಮಾನಿಗಳು, ಶಿಕ್ಷಕ, ಸಿಬ್ಬಂದಿ ಉಪಸ್ಥಿತರಿದ್ದರು.
ಮಕ್ಕಳನ್ನು ಆಕರ್ಷಕ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದಲ್ಲಿ ನವಾಗತ ಮಕ್ಕಳನ್ನು ಆರತಿ ಬೆಳಗುವುದರ ಮೂಲಕ ಸ್ವಾಗತಿಲಾಯಿತು. ಆಕರ್ಷಣಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ವತಿಯಿಂದ 1 ರಿಂದ 7ನೇ ತರಗತಿವರೆಗಿನ ಮಕ್ಕಳಿಗೆ ಬ್ಯಾಗ್, ಪುಸ್ತಕ, ಕಲಿಕೋಪಕರಣಗಳನ್ನು ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಗೀತಾಕುಮಾರಿ ಸ್ವಾಗತಿಸಿದರು. ಹಿರಿಯ ಶಿಕ್ಷಕ ವೆಂಕಟ ವಿದ್ಯಾಸಾಗರ್ ವಂದಿಸಿದರು. ಶಿಕ್ಷಕ ಮಂಜುನಾಥ್ ನಿರೂಪಿಸಿದರು.




.jpg)
.jpg)

