ಸಂಗಾರೆಡ್ಡಿ: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಘಟಕದಲ್ಲಿ ಇಂದು (ಸೋಮವಾರ) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶಮೈಲಾರಂ ಕೈಗಾರಿಕಾ ಎಸ್ಟೇಟ್‌ನಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ಘಟಕದಲ್ಲಿ ಶಂಕಿತ ಸ್ಫೋಟ ಸಂಭವಿಸಿದ್ದು, ಹಲವರು ಸಿಲುಕಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈವರೆಗೆ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.
ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ವೈದ್ಯಕೀಯ ನೆರವು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಔಷಧ ಘಟಕದಲ್ಲಿ ಸ್ಫೋಟ:




