ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮುಂಗಾರು ಮಳೆ ಸಕ್ರಿಯವಾಗಿದ್ದು, ಹಲವಾರು ಪ್ರದೇಶಗಳಲ್ಲಿ ಭೂಕುಸಿತ ಸೇರಿದಂತೆ ಭಾರಿ ಹಾನಿ ಉಂಟಾಗಿದೆ.
ಶಿಮ್ಲಾದ ಉಪನಗರ ಭಟ್ಟಾಕುಫರ್‌ನಲ್ಲಿ ಮೇಘಸ್ಫೋಟದಿಂದಾಗಿ ಭಾರಿ ಮಳೆಯಾಗಿದ್ದು, ಐದು ಅಂತಸ್ತಿನ ಕಟ್ಟಡ ಕುಸಿದಿದೆ.
ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿವೆ.
ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಅಪಾಯದ ಸೂಚನೆಯ ಹಿನ್ನೆಲೆಯಲ್ಲಿ ಅಲ್ಲಿಂದ ಜನರನ್ನು ಸ್ಥಳಾಂತರಿಸಲಾಗಿತ್ತು.
ರಾಂಪುರದಲ್ಲಿ ಮೇಘಸ್ಫೋಟದಿಂದಾಗಿ ಹಲವಾರು ಹಸುಗಳು ಕೊಚ್ಚಿ ಹೋಗಿವೆ. ಹಲವಾರು ಕಡೆಗಳಲ್ಲಿ ಭೂಕುಸಿತದಿಂದಾಗಿ ರಸ್ತೆ ಸಂಚಾರಕ್ಕೆ ತೊಡಕಾಗಿದೆ.
ನಿರಂತರ ಮಳೆ ಹಿನ್ನೆಲೆಯಲ್ಲಿ ಹಿಮಾಚಲದ 12 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.




