ಮುಳ್ಳೇರಿಯ: ಇಲ್ಲಿನ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಪ್ರಾರ್ಥನಾ ಸಭೆಯಲ್ಲಿ ಗುರುವಾರ ಪರಿಸರ ದಿನವನ್ನು ಆಚರಿಸಲಾಯಿತು. ಆ ಪ್ರಯುಕ್ತ ವಿದ್ಯಾರ್ಥಿಗಳು ಪ್ರಕೃತಿಯ ಮಹತ್ವ ಮತ್ತು ಸಂರಕ್ಷಣೆಗೆ ಸಂಬಂಧಿಸಿ ಮಾತನಾಡಿದರು. ಮತ್ತು ಪರಿಸರ ಸಂರಕ್ಷಣೆಯ ಪ್ರಯೋಜನ ಮತ್ತು ಪ್ರಕೃತಿ ವಿನಾಶದ ಪರಿಣಾಮಗಳ ಕುರಿತು ಏಕಾಂಕ ನಾಟಕವನ್ನು ಪ್ರದರ್ಶಿದರು. ನಂತರ ಪರಿಸರರಕ್ಷಣೆಯ ಕುರಿತು ಜಾಗೃತಿಯನ್ನು ಮೂಡಿಸುವ ಪೋಸ್ಟರ್‍ಗಳ ರಚನೆ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಬಳಿಕ ವಿದ್ಯಾರ್ಥಿಗಳು ತಂದ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಮತ್ತು ಆಡಳಿತ ಮಂಡಳಿಯ ಸದಸ್ಯರು ಸಹಕರಿಸಿದರು.




.jpg)
.jpg)

