ಕಾಸರಗೋಡು: ನಿವೃತ್ತ ಕನ್ನಡ ಪ್ರಾಧ್ಯಾಪಕ, ಜಾನಪದ ವಿದ್ವಾಂಸ, ಯಕ್ಷಗಾನ ಗೊಂಬೆಯಾಟ ಕಲಾವಿದ ಪೆÇ್ರ.ಎ.ಶ್ರೀನಾಥ್ ಕಾಸರಗೋಡು ಅವರು ಪ್ರತಿಷ್ಠಿತ "ಕಯ್ಯಾರ" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಮತ್ತು ಸಾಂಸ್ಕøತಿಕ ಅಕಾಡೆಮಿ ಕಾಸರಗೋಡು ಕಲ್ಕೂರ ಪ್ರತಿಷ್ಠಾನ ಮಂಗಳೂರು, ಗ್ರೀನ್ ಸ್ಟಾರ್ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ಕಯ್ಯಾರ್, 16ನೇ ವಾರ್ಡು ಕಯ್ಯಾರು ಕುಟುಂಬ ಶ್ರೀ ಘಟಕಗಳ ಸಹಯೋಗದಲ್ಲಿ ಕಾಯ್ಕ್ರಮ ನಡೆಯುವುದು. ಕಯ್ಯಾರು ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಜೂ.18ರಂದು ಬೆಳಗ್ಗೆ 9ರಿಂದ ನಡೆಯುವ ನಾಡೋಜ ಡಾ.ಕಯ್ಯಾರ ಕಿಞಣ್ಣ ರೈ ಜನ್ಮದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವುದು.
ಪ್ರೊ. ಶ್ರೀನಾಥ್ ಕಾಸರಗೋಡು ಅವರು ಸಾಹಿತ್ಯಿಕ, ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಘಿದ್ದು, ಮೂರು ದಶಕಗಳ ಕಾಲ ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಎನ್ನೆಸ್ಸೆಸ್ ಯೋಜನೆಯ ಶಿಬಿರ ನಿರ್ದೇಶಕರಾಗಿ, ಯೋಜನಾಧಿಕಾರಿಯಾಗಿ ಎನ್ನೆಸ್ಸೆಸ್ ಘಟಕಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು.
ಕೇರಳ ಸರ್ಕಾರದ ಸಂಪೂರ್ಣ ಸಾಕ್ಷರತಾ ಯೋಜನೆಯ ಯೋಜನಾಧಿಕಾರಿಯಾಗಿ, ಕೇರಳ ರಾಜ್ಯದ ಪಠ್ಯಪುಸ್ತಕ ಸಮಿತಿಯ ಸಂಯೋಜಕ, ಸದಸ್ಯರಾಗಿ, ಕಣ್ಣೂರು ವಿವಿ ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರಾಗಿ, ತುಳು ನಿಘಂಟು ರಚನಾ ಸಮಿತಿಯ ಸಹಾಯಕ ಸಂಯೋಜಕ, ಬಹುಭಾಷ ನಿಘಂಟು ರಚನೆಯಲ್ಲಿ ಉಪಸಂಪಾದಕರಾಗಿ, ಕೇರಳ ತುಳು ಅಕಾಡೆಮಿ ಸದಸ್ಯ, ಏಡ್ಸ್ ಜನಜಾಗೃತಿ ಯೋಜನೆಯ ನಿಧಿಜ್ಞ, ನೆಹರೂ ಯುವಕೇಂದ್ರ ಸಲಹಾ ಸಮಿತಿ ಸದಸ್ಯರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ.
ಅನೇಕ ವೈಚಾರಿಕ, ಸಂಶೋಧನಾತ್ಮಕ ಲೇಖನಗಳನ್ನು ಬರೆದಿರುವ ಅವರು ನೂರಾರು ಕೃತಿಗಳಿಗೆ ಮುನ್ನುಡಿ, ಬೆನ್ನುಡಿ ಬರೆದಿದ್ದಾರೆ. ಸ್ಮರಣ ಸಂಚಿಕೆಗಳ ಸಂಪಾದಕರಾಗಿ ಸೇವೆಗೈದಿದ್ದಾರೆ. ಕವಿಗೋಷ್ಠಿ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸಿದ್ದಲ್ಲದೆ, ಸಾಹಿತ್ಯಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡಿದ್ದಾರೆ. 2010ರಲ್ಲಿ ಅವರ ಅಭಿಮಾನಿಗಳು "ಶ್ರೀನಿಧಿ" ಎಂಬ ಅಭಿನಂದನೆ ಗ್ರಂಥ ಸಮರ್ಪಿಸಿದ್ದಾರೆ. ನೂರಾರು ಕಡೆ ಸನ್ಮಾನ, ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.


