ಪೆರ್ಲ: ಪಡ್ರೆ ವಾಣೀನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಗೆ ಕಾಸರಗೋಡು ಜಿಲ್ಲಾ ಪಂಚಾಯಿತಿ ವತಿಯಿಂದ ಮಂಜೂರಾದ ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕವನ್ನು ಗುರುವಾರ ಉದ್ಘಾಟಿಸಲಾಯಿತು. ಜಿ.ಪಂ.ಸದಸ್ಯ ನಾರಾಯಣ ನಾಯ್ಕ್ ಅಡ್ಕಸ್ಥಳ ಉದ್ಘಾಟಿಸಿದರು. ವಾರ್ಡ್ ಸದಸ್ಯ ನರಸಿಂಹ ಪೂಜಾರಿ, ರಾಮಚಂದ್ರ ಎಂ., ಪಿಟಿಎ ಅಧ್ಯಕ್ಷ ಯೋಗೀಶ್ ಕಡಂಬಳಿತ್ತಾಯ, ಪ್ರಭಾರ ಪ್ರಾಂಶುಪಾಲೆ ಉಷಾ ಕುಮಾರಿ, ಮುಖ್ಯ ಶಿಕ್ಷಕ ವಾಸುದೇವ ನಾಯಕ್, ಎಂಪಿಟಿಎ ಸದಸ್ಯೆ ಹರ್ಷಲತ, ಎಸ್ ಎಂ ಸಿ ಅಧ್ಯಕ್ಷೆ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.




.jpg)
