ಮಂಜೇಶ್ವರ: ಕಳಿಯೂರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ಸಪ್ತಹದ ಅಂಗವಾಗಿ ವಿವಿಧ ಕಾರ್ಯಕ್ರಮವನ್ನು ಗುರುವಾರ ನಡೆಸಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಕ್ರಬೈಲ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮೋಹನ್ ವಾಚನಾ ಸಪ್ತಾಹದ ಕಾರ್ಯಕ್ರಮವನ್ನು ಉಧ್ಘಾಟಿಸಿ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಎಮ್.ಪಿ.ಟಿ ಎ ಅಧ್ಯಕ್ಷೆ ಸೀತಾಲಕ್ಷ್ಮಿ, ಎಸ್.ಎಸ್.ಜಿ ಕನ್ವೀನರ್ ಜಯಪ್ರಕಾಶ್ ಡಿಸೋಜ, .ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಶ್ರೀಪತಿ, ಮುಖ್ಯೋಪಾಧ್ಯಾಯಿನಿ ಪುಷ್ಪಾವತಿ ಉಪಸ್ಥಿತರಿದ್ದರು. ಬಳಿಕ ವಿವಿಧ ಪುಸ್ತಕ ಪ್ರದರ್ಶನ ಏರ್ಪಡಿಸಿ ವಿವಿಧ ಸ್ಪರ್ಧೆಯನ್ನು ನಡೆಸಲಾಯಿತು.




.jpg)
.jpg)
.jpg)
