ಕೊಚ್ಚಿ: ಮೆಟ್ರಿಕ್ ಪೂರ್ವ ಹಾಸ್ಟೆಲ್ ನಿಂದ ಮೂವರು ಹುಡುಗಿಯರು ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಾಗಿದೆ. ಕಾಣೆಯಾದ ಹುಡುಗಿಯರು ಪರವೂರಿನ ವನಿಯಕ್ಕಾಡ್ ನಲ್ಲಿರುವ ಮೆಟ್ರಿಕ್ ಪೂರ್ವ ಹಾಸ್ಟೆಲ್ ನಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯರು.
ಘಟನೆ ಇಂದು ಬೆಳಿಗ್ಗೆ ಅಧಿಕಾರಿಗಳ ಗಮನಕ್ಕೆ ಬಂದಿತು. ನಂತರ ಪೆÇಲೀಸರಿಗೆ ದೂರು ದಾಖಲಾಗಿದೆ. ಪೆÇಲೀಸರು ತನಿಖೆ ಆರಂಭಿಸಿದ್ದಾರೆ. ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.


