ಬದಿಯಡ್ಕ: ಭಾರತೀಯ ಜನತಾ ಪಕ್ಷದ ಬದಿಯಡ್ಕ ಮಂಡಲ ಸಮಿತಿಯ ನೇತೃತ್ವದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗೆ ವಿರುದ್ಧವಾಗಿ ಸೆಟೆದು ನಿಂತು ಹೋರಾಡಿ ಜೈಲುವಾಸ ಅನುಭವಿಸಿದ ಹಿರಿಯ ಕಾರ್ಯಕರ್ತರಾದ ಕೈಲಂಕಜೆ ಗಣಪತಿ ಭಟ್ ಅವರನ್ನು ಗೌರವಿಸಲಾಯಿತು.
ತುರ್ತು ಪರಿಸ್ಥಿತಿಯ ಸಂದರ್ಭ ಜೈಲುವಾಸ ಅನುಭವಿಸಿದ್ದ ಪಕ್ಷದ ಹಿರಿಯ ಮುಖಂಡ ಎಂ.ಸಂಜೀವ ಶೆಟ್ಟಿ ಮೊಟ್ಟೆಕುಂಜ ಇವರ ನೇತೃತ್ವದಲ್ಲಿ ಶಾಲು ಹಾಕಿ ಗೌರವಿಸಲಾಯಿತು. ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ, ಜಿಲ್ಲಾ ನೇತಾರ ಸುಧಾಮ ಗೋಸಾಡ, ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಮಂಡಲ ಕೋಶಾಧಿಕಾರಿ ನಾರಾಯಣ ಭಟ್ ಬದಿಯಡ್ಕ, ವಲಯ ಅಧ್ಯಕ್ಷ ವಿಶ್ವನಾಥ ಪ್ರಭು, ಪ್ರಧಾನ ಕಾರ್ಯದರ್ಶಿ ಆನಂದ ಕೆ ಮೊದಲಾದವರು ಭಾಗವಹಿಸಿದ್ದರು.




.jpg)
