ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪ್ರಭಾರ ಮುಖ್ಯ ಶಿಕ್ಷಕಿ ಆರತಿ ಪರಿಸರ ದಿನವನ್ನು ಆಚರಿಸುವ ಪ್ರಾಮುಖ್ಯತೆ ಬಗ್ಗೆ ತಿಳಿಸಿ, ಪ್ಲಾಸ್ಟಿಕ್ ಮುಕ್ತ ಗ್ರಾಮ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಕೆಲಸ ಮಾಡಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿನಿ ನಿಶ್ಮಿತಾ ದಿನದ ಮಹತ್ವ ದ ಬಗ್ಗೆ ಇಂಗ್ಲೀಷ್ ನಲ್ಲಿ ಭಾಷಣ ಮಾಡಿದಳು. Á್ದ್ಯರ್ಥಿನಿ ಅಜ್ಮೀಯ ಪ್ರತಿಜ್ಞೆ ಓದುವುದರ ಮೂಲಕ ಎಲ್ಲ ವಿಧ್ಯಾರ್ಥಿಗಳಿಂದ ಪ್ರತಿಜ್ಞೆ ಮಾಡಿಸಲಾಯಿತು. ಸ್ಕೌಟ್ ಹಾಗು ಗೈಡ್ಸ್ ನ ಮಕ್ಕಳು ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಟ್ಟರು. ಬಳಿಕ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಹಾಗು ಪೆÇೀಸ್ಟರ್ ನಿರ್ಮಾಣ ಸ್ಪರ್ಧೆಗಳನ್ನು ನಡೆಸಲಾಯಿತು.






