ಬದಿಯಡ್ಕ: ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿ ನೇತೃತ್ವದಲ್ಲಿ ಪಕ್ಷದ ಮವ್ವಾರು ಕಚೇರಿಯಲ್ಲಿ ಡಾ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು ಆಚರಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಪಕ್ಷದ ದೇಶೀಯ ಸಮಿತಿ ಸದಸ್ಯ ಎಂ. ಸಂಜೀವ ಶೆಟ್ಟಿ ಮೊಟ್ಟೆಕುಂಜ ಸಭೆಯನ್ನು ಉದ್ಘಾಟಿಸಿ ಮಾತಾಡಿದರು. ಡಾ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಕಾಶ್ಮೀರದ 370ನೇ ವಿಧಿಯ ಕಸನ್ನು ನರೇಂದ್ರ ಮೋದಿ ಸರ್ಕಾರದಿಂದ ಹಿಂತೆಗೆಯಲು ಸಾಧ್ಯವಾಯಿತು ಎಂದರು.
ಪಂಚಾಯಿತಿ ಸಮಿತಿ ಅಧ್ಯಕ್ಷ ಶಶಿಧರ ತೆಕ್ಕೆಮೂಲೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಉಪಾಧ್ಯಕ್ಷೆ ನಳಿನಿಕೃಷ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಪ್ರಮುಖರಾದ ಸುಧಾಮ ಗೋಸಾಡ, ಜಯಪ್ರಕಾಶ್ ರೈ, ರಘು ಮಾಚವು, ಕಾರ್ಯಕರ್ತರು ಉಪಸ್ಥಿತರಿದ್ದರು.



.jpg)
