ಮಂಜೇಶ್ವರ : ಬಿಜೆಪಿ ಮಂಜೇಶ್ವರ ಮಂಡಲ ಮಾಜಿ ಪ್ರಧಾನ ಕಾರ್ಯದರ್ಶಿ, ಮೀಯಪದವು ವಿದ್ಯಾವರ್ಧಕ ಪ್ರೌಢಶಾಲಾ ನಿವೃತ್ತ ಅಧ್ಯಾಪಕ ಪಿ.ವಿ ಭಟ್(77)ಅವರು ತಮ್ಮ ಹುಟ್ಟೂರು ಉತ್ತರಕನ್ನಡ ಜಿಲ್ಲೆಯ ಸಾಲ್ಕೋಡಿನಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ದೀರ್ಘ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಇವರು ನಿವೃತ್ತಿಯ ನಂತರ ಮಂಜೇಶ್ವರ ಮಂಡಲದಲ್ಲಿ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಅನರೋಗ್ಯದ ಹಿನ್ನೆಲೆಯಲ್ಲಿ ಕೆಲವು ವರ್ಷಗಳ ಹಿಂದೆ ಹುಟ್ಟೂರಿಗೆ ತೆರಳಿದ್ದರು. ಅವರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.





