ಕಾಸರಗೋಡು: ಕೇರಳರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ನಿರ್ದೇಶಕರಾಗಿ ಕಾಸರಗೋಡಿನ ಡಾ. ಕೆ.ಎನ್ ವೆಂಕಟ್ರಮಣ ಹೊಳ್ಳ ಅವರನ್ನು ಕೇಂದ್ರ ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಿದೆ. ಕಾಸರಗೋಡು ಬಿ.ಇ.ಎಂ. ಹೈಸ್ಕೂಲಿನ ಸಾರ್ವಜನಿಕ ಶಿಕ್ಷಣ ಸಂರಕ್ಷಣ ಯಜÐದ ಅಧ್ಯಕ್ಷ, ಬಾಲಭವನ ಶಾಲೆಯ ಅಕಾಡೆಮಿಕಲ್ ಸಲಹೆಗಾರರಾಗಿ ನಡೆಸುತ್ತಿರುವ ಸೇವೆ ಪರಿಗಣಿಸಿ ಈ ಆಯ್ಕೆ ನಡೆಸಲಾಗಿದೆ.
ನಿರ್ದೇಶಕರಾಗಿ ಆಯ್ಕೆಯಾದ ಡಾ. ವೆಂಕಟ್ರಮಣ ಹೊಳ್ಳ ಅವರನ್ನು ಕಾಸರಗೋಡು ಕನ್ನಡ ಭವನದಲ್ಲಿ ಇತ್ತೀಚೆಗೆ ನಡೆದ ಕೇರಳರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಗೌರವಿಸಿ, ಕೇಂದ್ರ ಸಮಿತಿಯಲ್ಲಿ ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಸಂಚಾಲಕ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅಥಿತಿಗಳಾಗಿ ಕೊಡಗು ಕನ್ನಡ ಭವನ ಅಧ್ಯಕ್ಷರಾದ ಬೊಳಜೀರ ಬಿ.ಅಯ್ಯಪ್ಪ, ಕಾಸರಗೋಡು ಜಿಲ್ಲಾ ಅಧ್ಯಕ್ಷ ವಿರಾಜ್ ಅಡೂರು, ಕೊಡಗು ಜಿಲ್ಲಾ ಅಧ್ಯಕ್ಷರಾದ ರುಬೀನಾ ಎಂ.ಎ, ಕನ್ನಡ ಭವನ ಸಂಚಾಲಕರಾದ ಸಂಧ್ಯಾರಾಣಿ ಟೀಚರ್, ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ತದರ್ಶಿ ವಿಶಾಲಾಕ್ಷ ಪುತ್ರಕಳ ಕನ್ನಡ ಭವನ ಕಾರ್ಯದರ್ಶಿ ವಸಂತ್ ಕೆರೆಮನೆ ಮೊದಲಾದವರು ಉಪಸ್ಥಿತರಿದ್ದರು.





